Sat,Oct18,2025
ಕನ್ನಡ / English

ಇನ್ಸ್ಪೆಕ್ಟರ್ ನಂದೀಶ್ ಸಾವು ಕೇಸ್ ಗೆ ಟ್ವಿಸ್ಟ್ : ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಎಂಟಿಬಿ | JANATA NEWS

29 Oct 2022

ರಾಯಚೂರು : ಪೋಸ್ಟಿಂಗ್‍ಗೆ 60-70 ಲಕ್ಷ ರೂ. ಕೊಟ್ಟು ಬಂದ್ರೆ ಹೃದಯಾಘಾತ ಆಗದೆ ಇನ್ನೇನಾಗುತ್ತೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ನಂದೀಶ್ ಸಾವು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.

ರಾಯಚೂರಿನಲ್ಲಿ ಕನಕದಾಸ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾವಿನ ಬಳಿಕ ನಾನು ನೋಡಲು ಹೋಗುವಾಗ ಹಿಂದೆ ಕಾರ್ಯಕರ್ತರು ಬರುತ್ತಿದ್ದರು. ಯಾಕೆ ಇಂತಹ ತೀರ್ಮಾನ ತಗೊಂಡ ಅಂತ ಹೇಳುತ್ತಾ ಬರುತ್ತಿದ್ದರು. 70-80 ಲಕ್ಷ ಖರ್ಚು ಮಾಡಿಬಿಟ್ಟೆ ಅಂತ ಟೆನ್ಷನ್‍ನಲ್ಲಿ ಇದ್ದೆ ಅಂತ ಹೇಳ್ತಿದ್ನಂತೆ. ಇಲ್ಲಿ ಏನ್ ಮಾಡಬೇಕು ಅಂತ ಖರ್ಚು ಮಾಡ್ದ, ಅಂತ ಹೇಳ್ದೆ ಅಷ್ಟೇ ಎಂದು ತಿಳಿಸಿದ್ದಾರೆ.

ಯಾವ ಕಾರಣಕ್ಕೆ ಸಸ್ಪೆಂಡ್ ಮಾಡಲಾಗಿತ್ತು ಎಂಬ ಬಗ್ಗೆ ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ, ಪಿಐ ನಂದೀಶ್​ ಹೃದಯಾಘಾತದಿಂದ ನಿಧನರಾಗಿದ್ದಾರೆಂದು ಮಾಹಿತಿ ಇದೆ. ಈಗ ಯಾವ್ಯಾವುದಕ್ಕೋ ಲಿಂಕ್​ ಮಾಡಿ ಮಾತಾಡುವುದು ಸರಿಯಲ್ಲ. ಕ್ಯಾಬರೆ, ಇಸ್ಪೀಟ್​ ಕ್ಲಬ್, ಕ್ಯಾಸಿನೋ ಬಂದಾಗಬೇಕೆಂದು ಸೂಚನೆ ನೀಡಲಾಗಿತ್ತು. ಕೆಲವು ಠಾಣಾ ವ್ಯಾಪ್ತಿಯಲ್ಲಿ ಮತ್ತೆ ಓಪನ್​ ಮಾಡುವ ಕೆಲಸ ನಡೆದಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆ ಬಂದ್​ ಆಗಬೇಕೆಂದು ಸೂಚನೆ ನೀಡಲಾಗಿತ್ತು. ಅಕ್ರಮ ನಡೆಯುತ್ತಿದ್ರೆ ಸ್ಥಳೀಯ ಅಧಿಕಾರಿ ಹೊಣೆಮಾಡುವಂತೆ ಹೇಳಿದ್ದೆ. ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಅಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಪಾರ್ಟಿಯಲ್ಲಿ ಸೂಡಾನ್​ ದೇಶದ 20 ಪ್ರಜೆಗಳು ಭಾಗವಹಿಸಿದ್ದರು. ಸಿಸಿಬಿ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಕಮಿಷನರ್,​ ನಂದೀಶ್ ಅವರನ್ನು​ ಅಮಾನತು ಮಾಡಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತರು ನನಗೆ ಮಾಹಿತಿ ನೀಡಿದ್ದರು ಎಂದು ಸ್ಪಷ್ಟಪಡಿಸಿದರು.

RELATED TOPICS:
English summary :Twist to Inspector Nandish death case: MTB defended his statement

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...