Sat,Oct18,2025
ಕನ್ನಡ / English

ಜು.5ರೊಳಗೆ ಎಲ್ಲ ಭರವಸೆ ಈಡೇರಿಸಬೇಕು, ಈಡೇರಿಸದಿದ್ದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ | JANATA NEWS

22 Jun 2023

ದಾವಣಗೆರೆ : ಜು.5ರೊಳಗೆ ಎಲ್ಲ ಭರವಸೆ ಈಡೇರಿಸಬೇಕು, ಈಡೇರಿಸದಿದ್ದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುವುದಾಗಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೇಂದ್ರದವರು ಅಕ್ಕಿ ಕೊಡುವುದಾಗಿ ಹೇಳಿರಲಿಲ್ಲ. ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಜೊತೆಗೆ ರಾಜ್ಯ ಸರ್ಕಾರ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಬೇಕು ಎಂದು ಒತ್ತಾಯಿಸಿ ಬಜೆಟ್ ಅಧಿವೇಶನ ಪ್ರಾರಂಭದಿಂದ ಮುಗಿಯುವರೆಗೂ ವಿಧಾನ ಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ತಾವೇ ಧರಣಿ, ಸತ್ಯಾಗ್ರಹ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಕಾಂಗ್ರೆಸ್ ತನ್ನ ಸುಳ್ಳು ಭರವಸೆಯಿಂದ ಇಷ್ಟು ಸೀಟು ಗೆದ್ದಿದೆ ಎಂದು ತಿಳಿಸಿದರು. ಭರವಸೆ ಈಡೇರಿಸಲು ಯೋಗ್ಯತೆ ಇರದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೆ ತರದಿದ್ದರೆ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತೇವೆ. ಇದರಲ್ಲಿ ಬಿಜೆಪಿ ರಾಜ್ಯ ನಾಯಕರು ಭಾಗವಹಿಸುತ್ತಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ನಂತರ ಪ್ರತಿಭಟನೆ ನಡೆಸಲಾಗುವುದು. ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದರು.

ರಾಜ್ಯಾದ್ಯಂತ 7 ತಂಡಗಳ ಪ್ರವಾಸ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಮುಗಿಸಿ ಇಂದು ದಾವಣಗೆರೆ ಜಿಲ್ಲೆಗೆ ಬಂದಿದ್ದೇನೆ. ಕಾಂಗ್ರೆಸ್ ಸರ್ಕಾರ ಮನೆ‌ ಮನೆಗೆ ಹೋಗಿ 5 ಗ್ಯಾರಂಟಿ ಪತ್ರ ಕೊಟ್ಟು ಬಂದಿದ್ದಾರೆ.

ಕಾಂಗ್ರೆಸ್ ಪಕ್ಷವು 5 ಗ್ಯಾರಂಟಿ ಕೊಟ್ಟಿದ್ದು, ಮಹಿಳೆಯರಿಗೆ ಉಚಿತ ಬಸ್ ಎಂಬುದು ಜಾರಿಯಲ್ಲಿದೆ. ಅದಕ್ಕೂ ಕೆಲವು ಅಡ್ಡಿ ಆತಂಕಗಳಿವೆ. ಉಳಿದ 4 ಗ್ಯಾರಂಟಿಗಳನ್ನು ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಕಾರ್ಯರೂಪಕ್ಕೆ ತರದೆ ಇದ್ದರೆ ಸದನದ ಒಳಗೆ ಮತ್ತು ಹೊರಗಡೆ ಸತ್ಯಾಗ್ರಹ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ಇಂದು ರಾತ್ರಿ 12 ಗಂಟೆಗೆ ಅಮೆರಿಕ ಸಂಸತ್ ಉದ್ದೇಶಿಸಿ ನಮ್ಮ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅಂತವರು ಪ್ರಧಾನಿಯಾಗಿ ಸಿಕ್ಕಿರುವುದು ನಮ್ಮ ಸೌಭಾಗ್ಯ ಎಂದರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತ ಜಗತ್ತಿನ 5 ನೇ ಅತಿ ದೊಡ್ಡ ಆರ್ಥಿಕ ಶಕ್ತಿಯ ದೇಶ ವಾಗಿದೆ. ಎಂಟು ವರ್ಷಗಳಲ್ಲಿ 530 ಬಿಲಿಯನ್ ಡಾಲರ್ ಬಂಡವಾಳವನ್ನು ಭಾರತದಲ್ಲಿ ಹೂಡಿಕೆ ಮಾಡಲಾ ಗಿದೆ. ಸ್ಟಾರ್ಟಪ್‌ನಲ್ಲಿ ವಿಶ್ವದ ಮೂರನೇ ರಾಷ್ಟ್ಟವಾಗಿದೆ. 2023ರಲ್ಲಿ ಅಮೆರಿಕಾ, ಚೀನಾಕ್ಕಿಂತಲೂ ಹೆಚ್ಚಿನ ಜಿಡಿಪಿ ಹೊಂದಿದೆ. ಈಗ ಭಾರತದ ಜಿಡಿಪಿ ಶೇ.9.1 ರಷ್ಟಿದೆ. ವಿವಿಧ ಯೋಜನೆಗಳ ಮೂಲಕ ಜನರ ಖಾತೆಗೆ ನೇರ ಹಣ ವರ್ಗಾವಣೆ ಆಗಿದೆ. ಆದರೂ, ಕರ್ನಾಟಕದ ಕಾಂಗ್ರೆಸ್‌ನವರು ಬಾಯಿ ಬಡುಕರಂತೆ ಮೋದಿಯವರ ಬಗ್ಗೆ ಮನ ಬಂದಂತೆ ಮಾತನಾಡುತ್ತಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :All the promises should be fulfilled by June 5, if not fulfilled, protest near the Gandhi statue of Vidhansouda.

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...